ʼಚಿನ್ನ ಮತ್ತು ಬೆಳ್ಳಿ ಬೆಲೆ ತುಸು ಇಳಿಕೆ ʼ

ಬೆಂಗಳೂರು, ಜೂನ್ 25: ದಾಖಲೆಯ ಮೊತ್ತಕ್ಕೆ ಏರಿದ್ದ ಚಿನ್ನದ ಬೆಲೆ ಕಳೆದ ಮೂರು ದಿನಗಳಿಂದ ನಿರಂತರವಾಗಿ ಕುಸಿಯುತ್ತಿದೆ. ಇವತ್ತು ಬುಧವಾರ ನಿನ್ನೆ ಮೊನ್ನೆಗಿಂತ ಹೆಚ್ಚು ಕುಸಿದಿದೆ. ಆಭರಣ ಚಿನ್ನ ಗ್ರಾಮ್​​ಗೆ 85 ರೂಗಳಷ್ಟು ಕುಸಿತ ಕಂಡಿದೆ. ನಿನ್ನೆ ಮಂಗಳವಾರ 75 ರೂ ಇಳಿದಿತ್ತು. ಮೂರು ದಿನಗಳಿಂದ ಒಟ್ಟಾರೆ 165 ರೂಗಳಷ್ಟು ಬೆಲೆ ಇಳಿಕೆ ಆಗಿದೆ. ವಿದೇಶಗಳಲ್ಲೂ ಇದರ ಬೆಲೆ ದೊಡ್ಡ ಮಟ್ಟದಲ್ಲಿ ಕುಸಿತವಾಗಿದೆ. ಬೆಳ್ಳಿ ಬೆಲೆ ಅಲ್ಪ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,220 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,210 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,700 ರೂ
  • ಚೆನ್ನೈ: 90,700 ರೂ
  • ಮುಂಬೈ: 90,700 ರೂ
  • ದೆಹಲಿ: 90,850 ರೂ
  • ಕೋಲ್ಕತಾ: 90,700 ರೂ
  • ಕೇರಳ: 90,700 ರೂ
  • ಅಹ್ಮದಾಬಾದ್: 90,750 ರೂ
  • ಜೈಪುರ್: 90,850 ರೂ
  • ಲಕ್ನೋ: 90,850 ರೂ
  • ಭುವನೇಶ್ವರ್: 90,700 ರೂ