ಮೈಸೂರು: ಕಬಿನಿ ಅಣೆಕಟ್ಟೆಯಿಂದ ಹೊರಹರಿವು ಹೆಚ್ಚಾಗುತ್ತಿದ್ದು, ತಗ್ಗು ಪ್ರದೇಶಗಳ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯ ಪ್ರಸ್ತುತ ಭರ್ತಿಯಾಗುವ ಹಂತದಲ್ಲಿದೆ. ಸದ್ಯ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 20,000 ಕ್ಯೂಸೆಕ್ಗೂ ಹೆಚ್ಚಿದ್ದು, 20,000 ದಿಂದ 30,000 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಯಾವುದೇ ಕ್ಷಣದಲ್ಲಾದರೂ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ, ನದಿ ಪಾತ್ರದ ಮತ್ತು ನದಿಯ ಎರಡೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
