ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: 9 ಜನರ ಬಂಧನ: ಜಾಮೀನಿನ ಮೇಲೆ ಬಿಡುಗಡೆ

ಮಡಿಕೇರಿ: ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಕೊಡಗಿಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆಯಲಾಗಿತ್ತು. ಈ ಪ್ರಕರಣದಲ್ಲಿ 9 ಮಂದಿಯ ವಿರುದ್ಧ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ 9 ಜನರನ್ನು ಬಿಡುಗಡೆ ಮಾಡಲಾಗಿದೆ.

ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸೇರಿದಂತೆ ಬಿಜೆಪಿ ಮುಖಂಡರು ಪೊಲೀಸರಿಗೆ ಮನವಿ ಮಾಡಿದ್ದರು‌.  ಆದರೆ ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.