ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇದೀಗ ಘಟನೆಗೆ ಕ್ಷಮೆಯಾಚಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ, ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಘೋಷಣೆ ಮಾಡಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನಾನು ಮತ್ತು ನನ್ನ ಸರ್ಕಾರ ಎಲ್ಲಾ ಜಗನ್ನಾಥ ಭಕ್ತರರಲ್ಲಿ ಕ್ಷಮೆಯಾಚಿಸುತ್ತದೆ. ಜೀವ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ. ಈ ಆಳವಾದ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಅವರಿಗೆ ನೀಡಬೇಕೆಂದು ಮಹಾಪ್ರಭು ಜಗನ್ನಾಥನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. 

ತಲಾ 25 ಲಕ್ಷ ಪರಿಹಾರ ಘೋಷಣೆ
ದುರಂತದಲ್ಲಿ ಪ್ರಾಣ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೇ ಈ ಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದವು ನಿಮ್ಮೊಂದಿಗಿರಲಿದೆ ಎಂದು ಭರವಸೆ ನೀಡಿದ್ದಾರೆ. 

ಆಡಳಿತಾತ್ಮಕ ತನಿಖೆಗೆ ಆದೇಶ
ಇನ್ನೂ ಘಟನೆಗೆ ನಿಖರ ಕಾರಣ ತಿಳಿಯಲು ಪೂರ್ಣ ಪ್ರಮಾಣದ ಆಡಳಿತಾತ್ಮಕ ತನಿಖೆಗೆ ಮಾಝಿ ಆದೇಶಿಸಿದ್ದಾರೆ. ಈ ಬೆನ್ನಲ್ಲೇ ಭದ್ರತಾ ಲೋಪಕ್ಕೆ ಕಾರಳವಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ವರದಿಗಳು ತಿಳಿಸಿವೆ.

ಏನಿದು ಘಟನೆ?
ಇದೇ ಜೂ.27ರಂದು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಬಳಿ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿ (70) ಎಂದು ಗುರುತಿಸಲಾಗಿದೆ. ಮೂವರೂ ಒಡಿಶಾದ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. 

ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಜಗನ್ನಾಥ ರಥಯಾತ್ರೆ ವಿಶೇಷ ಏನು?
ಅಹಮದಾಬಾದ್‌ನಲ್ಲಿ ನಡೆಯುವ ರಥಯಾತ್ರೆ ಅದೊಂದು ಐತಿಹಾಸಿಕ ಹಿಂದೂ ಹಬ್ಬ. 1878ರಿಂದಲೂ ಪ್ರತಿವರ್ಷ ರಥೋತ್ಸವ ಜರುಗುತ್ತಿದೆ. ಜಗನ್ನಾಥ ದೇವಸ್ಥಾನವು ಆಷಾಢ ಸುಧ್ ಬಿಜ್‌ನಂದು ರಥಯಾತ್ರೆ ಮೆರವಣಿಗೆಯನ್ನು ಆಯೋಜಿಸುತ್ತದೆ. ಈ ಹಬ್ಬದಂದು ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವತೆಗಳನ್ನು ಪೂಜಿಸಲಾಗುತ್ತದೆ. ಇದು 148ನೇ ಜಗನ್ನಾಥ ರಥಯಾತ್ರೆ ಆಗಿದೆ.