ಬೆಂಗಳೂರು, ಜೂನ್ 30: ಕಳೆದ ಒಂದು ವಾರದಿಂದ ನಿರಂತರವಾಗಿ ಇಳಿಯುತ್ತಾ ಬಂದಿರುವ ಚಿನ್ನದ ಬೆಲೆ ಈ ವಾರವೂ ಅದೇ ಹಾದಿಯಲ್ಲಿದೆ. ಇವತ್ತು ಸೋಮವಾರ ಆಭರಣ ಚಿನ್ನದ ಬೆಲೆ ಗ್ರಾಮ್ಗೆ 15 ರೂ ತಗ್ಗಿದೆ. 8,930 ರುನಿಂದ 8,915 ರೂಗೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಇವತ್ತು ಅಲ್ಪ ಇಳಿಕೆ ಕಂಡಿದೆ. ಗ್ರಾಮ್ಗೆ 10 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,770 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,770 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 30ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,260 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,940 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,077 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,260 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,077 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 89,150 ರೂ
- ಚೆನ್ನೈ: 89,150 ರೂ
- ಮುಂಬೈ: 89,150 ರೂ
- ದೆಹಲಿ: 89,300 ರೂ
- ಕೋಲ್ಕತಾ: 89,150 ರೂ
- ಕೇರಳ: 89,150 ರೂ
- ಅಹ್ಮದಾಬಾದ್: 89,200 ರೂ
- ಜೈಪುರ್: 89,300 ರೂ
- ಲಕ್ನೋ: 89,300 ರೂ
- ಭುವನೇಶ್ವರ್: 89,150 ರೂ


