ಜು.2ರಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸುವ ಸಾಧ್ಯತೆಯಿದ್ದು, ಜು.2ರಿಂದ 5ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದೆರೆಡು ವಾರದಿಂದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಸದ್ಯ ಹವಾಮಾನ ಇಲಾಖೆ ಮಳೆ ಮೂನ್ಸುಚನೆ ನೀಡಿದ್ದು, ಇಂದಿನಿಂದ ರಾಜ್ಯದ ಬಹುತೇಕ ಕಡೆ ಮಳೆಯಾಗುವ ಬಗ್ಗೆ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದಲ್ಲಿ ವರುಣನ ಅಬ್ಬರ ತಗ್ಗಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಾಳೆ (ಜು.1) ಉಡುಪಿ, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಜು.2ರಿಂದ 5ರವರೆಗೆ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ನೀಡಲಾಗಿದೆ.