‘ಮೊಟ್ಟೆ’ ಎಸೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರಿಂದ ಮನವಿ

ಕಾರವಾರ: ಮಾಜಿ ಸಿ ಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಕಾರವಾರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಉತ್ತರಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಮೊಟ್ಟೆ ಎಸೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಮನವಿ ಸಲ್ಲಿಸಿದರು.