ಕರ್ನಾಟಕದ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಸುರಿಯಲಿದೆ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು, ಜುಲೈ 2: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಯ ಪ್ರಮಾಣ ಹೆಚ್ಚಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕ್ಯಾಸಲ್​​ರಾಕ್, ಮೂಡುಬಿದಿರೆ, ಗೇರುಸೊಪ್ಪ, ಹೊನ್ನಾವರ, ಚಿಂಚೋಳಿ, ಬೀದರ್, ಸೋಮವಾರಪೇಟೆ, ಆಗುಂಬೆ, ಭಾಗಮಂಡಲ, ಕೊಟ್ಟಿಗೆಹಾರ, ಶೃಂಗೇರಿ, ಲೋಂಡಾ, ಕಲಬುರಗಿ, ಮಂಠಾಳ, ಹುಮ್ನಾಬಾದ್, ಭಾಲ್ಕಿ, ಪುತ್ತೂರು, ಕೋಟಾ, ಮಂಗಳೂರು, ಸಿದ್ದಾಪುರ, ಕದ್ರಾ, ಉಡುಪಿ, ಮಂಕಿ, ಯಲ್ಲಾಪುರ, ಬೆಳ್ತಂಗಡಿ, ಸುಳ್ಯ, ಅಡಕಿ, ನಿಪ್ಪಾಣಿ, ಸಂಕೇಶ್ವರ, ಕಮ್ಮರಡಿ, ಜಯಪುರ, ಕಳಸದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 27.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.