ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಣೆ

ಕಾರವಾರ: ನಗರದ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಶುಕ್ರವಾರ ಶ್ರೀ ಕೃಷ್ಣ ಜಯಂತಿ ಆಚರಣೆಯನ್ನು ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ ಶ್ರೀ ಕೃಷ್ಣ ಜಯಂತಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪುಷ್ಪಾರ್ಚನೆ ಮಾಡುವ ಮೂಲಕ ನಮಿಸಿದರು. ವಿವಿಧ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.