
ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬರ್ಮಿಂಗ್ ಹ್ಯಾಮ್‌ನಲ್ಲಿ ಇತಿಹಾಸ ಬರೆದಿದ್ದಾರೆ. ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ 10 ರನ್ ಬಾರಿಸುತ್ತಿದ್ದಂತೆ ವಿಶೇಷ ಕ್ಲಬ್‌ಗೆ ಎಂಟ್ರಿ ನೀಡಿದರು. ಹಾಗಿದ್ದರೆ ಜೈಸ್ವಾಲ್ ಎಂಟ್ರಿ ನೀಡಿದ ಆ ಕ್ಲಬ್ ಯಾವುದು? ಎಂಬ ಬಗ್ಗೆ ವರದಿ ಇಲ್ಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗೆ 77 ರನ್‌ಗಳಿಂದ ಆಟ ಮುಂದುವರೆಸಿ, 407 ರನ್‌ಗೆ ಆಲೌಟ್ ಆಯಿತು. ಭಾರತ 180 ರನ್ ಮುನ್ನಡೆ ಸಾಧಿಸಿತು. ಶುಕ್ರವಾರ ಟೀಮ್ ಇಂಡಿಯಾ ಎರಡನೇ ಇನಿಂಗ್ಸ್ ಆರಂಭಿಸಿತು. ಈ ವೇಳೆ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದರು. ಎಲ್ಲರ ಕಣ್ಣುಗಳು ಯಶಸ್ವಿ ಜೈಸ್ವಾಲ್ ಅವರ ಮೇಲೆ ನೆಟ್ಟಿದ್ದವು.
ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಈ ಇನಿಂಗ್ಸ್ ಆಡುವ ಮುನ್ನ 39 ಇನಿಂಗ್ಸ್‌ಗಳಲ್ಲಿ 1990 ರನ್ ಬಾರಿಸಿದ್ದರು. ಇವರಿಗೆ 2 ಸಾವಿರ ರನ್ ಪೂರ್ಣಗೊಳಿಸಲು 10 ರನ್ ಅವಶ್ಯಕತೆ ಇತ್ತು. ಇನಿಂಗ್ಸ್‌ನ ನಾಲ್ಕನೇ ಓವರ್‌ನ ಐದನೇ ಎಸೆತದಲ್ಲಿ ಬ್ಯಾಕ್‌ವರ್ಡ್ ಪಾಯಿಂಟ್ ಕ್ಷೇತ್ರದಲ್ಲಿ ಬೌಂಡರಿ ಬಾರಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್ ಕಲೆ ಹಾಕಿದ ಎಲೈಟ್ ಕ್ಲಬ್‌ಗೆ ಯಶಸ್ವಿ ಜೈಸ್ವಾಲ್ ಪಾತ್ರರಾದರು.
ಎಲೈಟ್ ಕ್ಲಬ್‌ಗೆ ಎಂಟ್ರಿ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 2 ಸಾವಿರ ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್, ಸುನಿಲ್ ಗವಾಸ್ಕರ್, ವಿಜಯ್ ಹಜಾರೆ ಅವರ ದಾಖಲೆ ಮೀರಿ ನಿಂತರು. ಗವಾಸ್ಕರ್ ಹಾಗೂ ಹಜಾರೆ 43 ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದರು. ಯಶಸ್ವಿ 40 ಇನಿಂನ್ಸ್‌ನಲ್ಲಿ ಈ ಸಾಧನೆ ಮಾಡಿದರು. ಈ ಮೂಲಕ ಯಶಸ್ವಿ ಎಲೈಟ್ ಕ್ಲಬ್‌ಗೆ ಎಂಟ್ರಿ ಪಡೆದರು. ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವೀರೇಂದ್ರ ಸೆಹ್ವಾಗ್ ಹಾಗೂ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟರ್ ರಾಹುಲ್ ದ್ರಾವಿಡ್ ಇಬ್ಬರೂ 40 ಇನಿಂಗ್ಸ್‌ಗಳಲ್ಲಿ 2 ಸಾವಿರ ರನ್ ಬಾರಿಸಿದ್ದರು. ಇದೇ ಎಲೈಟ್ ಕ್ಲಬ್‌ಗೆ ಯಶಸ್ವಿ ಜೈಸ್ವಾಲ್ ಎಂಟ್ರಿ ಪಡೆದರು.
ಯಶಸ್ವಿ ಜೈಸ್ವಾಲ್ ಶುಕ್ರವಾರ ಬಿರುಸಿನ ಬ್ಯಾಟಿಂಗ್ ನಡೆಸಿದರು. ಈ ವೇಳೆ ಇವರು 22 ಎಸೆತಗಳಲ್ಲಿ 6 ಬೌಂಡರಿ ನೆರವಿನಿಂದ 28 ರನ್ ಬಾರಿಸಿ ಜೋಶ್ ಟಂಗ್‌ಗೆ ವಿಕೆಟ್ ಒಪ್ಪಿಸಿದರು.
ಭಾರತ ಎರಡನೇ ಇನಿಂಗ್ಸ್ ಟೀಮ್ ಇಂಡಿಯಾ ಎರಡನೇ ಇನಿಂಗ್ಸ್‌ನಲ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದೆ. ಈ ವೇಳೆ ಟೀಮ್ ಇಂಡಿಯಾ ಮೂರನೇ ದಿನದಾದಟದಂತ್ಯಕ್ಕೆ 1 ವಿಕೆಟ್‌ಗೆ 64 ರನ್ ಸೇರಿಸಿತು. ಈ ಮೂಲಕ ಪ್ರವಾಸಿ ತಂಡ 244 ರನ್‌ಗಳ ಮುನ್ನಡೆ ಸಾಧಿಸಿದೆ. ಇನ್ನು ನಾಲ್ಕನೇ ದಿನಕ್ಕೆ ಕರುಣ್ ನಾಯರ್ (ಅಜೇಯ 7 ರನ್), ಕೆಎಲ್ ರಾಹುಲ್ (ಅಜೇಯ 28 ರನ್) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
