
ನಿರಂತರ ಮಳೆಗೆ ಕರ್ನಾಟಕ ಮತ್ತು ಗೋವಾ ಮಧ್ಯೆ ಸಂಪರ್ಕ ಕಲ್ಪಿಸುವ ಅನಮೋಡ ಬಳಿಯ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಇದರಿಂದ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ನಿಧಾನಗತಿಯ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿಯ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ಸುಮಾರು 500 ಮೀಟರ್ನಷ್ಟು ಬಿರುಕು ಬಿಟ್ಟಿತ್ತು. ಹೀಗಾಗಿ, ಹೆದ್ದಾರಿಗೆ ಮೇಲಿಂದ ಸಿಮೆಂಟ್ ಹಾಕಲಾಗಿತ್ತು. (ಜು.05) ಕುಸಿತವಾಗಿದೆ. ಗೋವಾ ಮತ್ತು ಕರ್ನಾಟಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



