ಬಿಹಾರ ಸಿಎಂ ನಿತೀಶ್ ಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.!

ಬಿಹಾರ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಾಜ್ಯದ ಬರ ಪರಿಸ್ಥಿತಿಯನ್ನು ಸಮೀಕ್ಷೆ ಮಾಡಲು ಸಿಎಂ ತೆರಳಿದ್ದರು.

ಇಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿನ ಬರ ಪರಿಸ್ಥಿತಿ ಸಮೀಕ್ಷೆಗಾಗಿ ಹೆಲಿಕ್ಯಾಪ್ಟರ್ ಮೂಲಕ ತೆರಳಿದ್ದರು. ಈ ವೇಳೆ ಹವಾಮಾನ ವೈಪರಿತ್ಯದಿಂದಾಗಿ, ಗಯಾದ ಬಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಿರೋದಾಗಿ ತಿಳಿದು ಬಂದಿದೆ.