ಶಾಲಾಬಸ್ಸು ಮತ್ತು ರೈಲು ನಡುವೆ ಭೀಕರ ಅಪಘಾತ ;3 ವಿದ್ಯಾರ್ಥಿಗಳು ಸಾ**, ಹಲವರಿಗೆ ಗಾಯ

ಚೆನ್ನೈ: ಶಾಲಾ ಬಸ್ಸಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ರೈಲು ಸಂಚಾರದ ವೇಳೆ ಗೇಟ್ ಹಾಕಿರಲಿಲ್ಲ ಎಂದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.