ಜುಲೈ 28ರಂದು ಮದ್ದೂರಿಗೆ ಸಿಎಂ ಆಗಮನ – 1,400 ಕೋಟಿ ರೂ. ಕಾಮಗಾರಿಗಳಿಗೆ ಗ್ರೀನ್ ಸಿಗ್ನಲ್

ಮಂಡ್ಯ: ಇದೇ ಜುಲೈ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ.

ಅಂದಾಜು‌ 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ/ ಶಿಲಾನ್ಯಾಸ ಮದ್ದೂರು ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಕಾಮಗಾರಿಗಳನ್ನ ಹಮ್ಮಿಕೊಳ್ಳಲಾಗಿದೆ. ಬೃಹತ್ ಕಾರ್ಯಕ್ರಮ ಆಯೋಜನೆಯ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ. 

ಲೋಕೋಯೋಗಿ ಇಲಾಖೆಯ 81 ಕೋಟಿ ರೂ., ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ 12 ಕೋಟಿ ರೂ., ಕಾವೇರಿ ನೀರಾವರಿ ನಿಗಮ 300 ಕೋಟಿ ರೂ. ಸೇರಿದಂತೆ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ನಡೆಯಲಿದೆ.