
ಆನಂದಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಆದ ಘಟನೆ ಗುರುವಾರ (ಜು.೧೦) ಬೆಳಗಿನ ಜಾವ ಆನಂದಪುರ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ಉಳ್ಳೂರು ಕ್ರಾಸ್ ನಲ್ಲಿ ಬೆಂಗಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್, ಸಾಗರದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನ ಗಳ ನಡುವೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಚಾಲಕ ಸಚಿನ್ ಗಂಭೀರ ಗಾಯಗೊಂಡಿದ್ದು ಅವರಿಗೆ ಸಾಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗಕ್ಕೆ ಕಳಿಸಲಾಯಿತು.
ಬಸ್ಸಿನಲ್ಲಿ 28 ಜನರು ಪ್ರಯಾಣಿಕರಿದ್ದು ಇದರಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಇವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


