ಗದಗ: ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಖಾರದ ಪುಡಿ ಎಸೆದು ದರೋಡೆಕೋರರ ದಾಳಿ

ಗದಗ: ಪೆಟ್ರೋಲ್ ಬಂಕ್ ಸಿಬ್ಬಂದಿಯ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿದ ಘಟನೆ ಗದಗನ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಗದಗನ ಬೆಟಗೇರಿಯ ಶರಣಬಸವೇಶ್ವರ ನಗರದ ಪೆಟ್ರೋಲ್ ಬಂಕ್ ನಲ್ಲಿ ಬುಧವಾರ (ಜು.09) ತಡರಾತ್ರಿ ಘಟನೆ ನಡೆದಿದೆ. ಸಿಬ್ಬಂದಿ ಬಂಕ್ ನಲ್ಲಿ ಮಲಗಿದ್ದರು. ಈ ವೇಳೆ ಗಾಜಿನ ಬಾಗಿಲು ಒಡೆದು ನುಗ್ಗಿದ ಕಳ್ಳರು ಫಕೀರೇಶ ಎನ್ನುವ ಸಿಬ್ಬಂದಿಗೆ ಚಾಕುವಿನಿಂದ ಬೆದರಿಸಿ ಹಣ ದರೋಡೆ ಮಾಡಿದ್ದಾರೆ. ಬುಧವಾರ ಕಲೆಕ್ಷನ್ ಮಾಡಿದ ಹಣದ ಬ್ಯಾಗ್ ದೋಚಿಕೊಂಡು ನಾಪತ್ತೆಯಾಗಿದ್ದಾರೆ.

ಮೂರು ಜನರ ದುಷ್ಕರ್ಮಿಗಳಿಂದ ಕೃತ್ಯ ನಡೆದಿದ್ದು, ಮುಂಜಾನೆ ಪೆಟ್ರೋಲ್ ಬಂಕ್ ಮಾಲೀಕರು ಬಂದಾಗ ವಿಷಯ ಬೆಳಕಿಗೆ ಬಂದಿದೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.