ಮಂತ್ರಾಲಯದಲ್ಲಿ ಅದ್ಭುತ ಧಾರ್ಮಿಕ ಉತ್ಸವ – ಗುರುಪೂರ್ಣಿಮೆ ಹಿನ್ನಲೆಯಲ್ಲಿ ಮೃತ್ತಿಕಾ ಸಂಗ್ರಹ ಸಡಗರ

ರಾಯಚೂರು: ಗುರುಪೂರ್ಣಿಮೆ ಹಿನ್ನೆಲೆ ರಾಯರ ಸನ್ನಿಧಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮೃತ್ತಿಕಾ ಸಂಗ್ರಹ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

ಮೆರವಣಿಗೆ ಮೂಲಕ ತುಳಸಿ ವನಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆಗಳನ್ನ ಸಲ್ಲಿಸಿ ಮೃತ್ತಿಕಾ ಸಂಗ್ರಹಿಸಿದರು. ಬಳಿಕ ಸುವರ್ಣ ಪಲ್ಲಕ್ಕಿಯಲ್ಲಿ ಮೃತ್ತಿಕಾವನ್ನು ಮೆರವಣಿಗೆ ಮೂಲಕ ತಂದು ರಾಯರ ವೃಂದಾವನದ ಮುಂದೆ ಇಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು.

ಗುರುವಾರವೇ ಗುರುಪೂರ್ಣಿಮೆ ಬಂದಿರುವ ಹಿನ್ನೆಲೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ರಾಯರ ದರ್ಶನಕ್ಕೆ ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು ಸೇರಿ ದೇಶದ ವಿವಿಧ ಭಾಗಗಳಿಂದ ಭಕ್ತ ಸಾಗರವೇ ಹರಿದು ಬಂದಿತ್ತು.