ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ವಿತರಣೆ

ಭಟ್ಕಳ: ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲನ ರೋಷನಿ ಆಡಿಟೋರಿಯಮ್‌ನಲ್ಲಿ ಶನಿವಾರದಂದು 2024-2025 ನೇ ಸಾಲಿನ ಒಲಿಂಪಿಯಾಡ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ವಿತರಣಾ ಕಾರ್ಯಕ್ರಮವು ರವಿವಾರದಂದು ಅದ್ದೂರಿಯಿಂದ ನಡೆಯಿತು.

2024-2025 ನೇ ಶೈಕ್ಷಣಿಕ ವರ್ಷದ ಒಲಿಂಪಿಯಾಡನಲ್ಲಿ 153 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 52 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಹಾಗೆಯೇ 3 ವಿದ್ಯಾರ್ಥಿಗಳು ಒಲಿಂಪಿಯಾಡ ಟಾಪರಗಳಾಗಿದ್ದಾರೆ.
76 ವಿದ್ಯಾರ್ಥಿಗಳು ವಲಯದಲ್ಲಿ ಟಾಪರ್‌ರಾಗಿ ಆಯ್ಕೆಯಾಗಿರುತ್ತಾರೆ. ಸುಮಾರು 80 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದು, 50 ವಿದ್ಯಾರ್ಥಿಗಳು ಬೆಳ್ಳಿಯ ಪದಕ ಹಾಗೂ 23 ವಿದ್ಯಾರ್ಥಿಗಳು ಕಂಚಿನ ಪದಕವನ್ನು ಪಡೆದಿರುತ್ತಾರೆ. ಇದರಲ್ಲಿ ದ್ವೀತೀಯ ಹಂತದ ಪರೀಕ್ಷೆಯಲ್ಲಿ 22 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಮಾನ್ಯ ಸಚಿವರು ಮೀನುಗಾರಿಕೆ, ಬಂದರು ಒಳನಾಡು ಜಲಸಾರಿಗೆ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಆದ ಶ್ರೀ ಮಂಕಾಳ ಎಸ್ ವೈದ್ಯ, ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ, ಆಡಳಿತ ನಿರ್ದೇಶಕಿಯವರಾದ ಡಾ.ಪುಷ್ಪಲತಾ ಮಂಕಾಳ್ ವೈದ್ಯ, ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.