ಬೆಂಗಳೂರು, ಜುಲೈ 11: ಚಿನ್ನದ ಬೆಲೆ ಸತತ ಎರಡನೇ ದಿನ ಏರಿಕೆ ಆಗಿದೆ. ನಿನ್ನೆ 22 ರೂ ಹೆಚ್ಚಿದ್ದ ಚಿನ್ನದ ಬೆಲೆ ಇಂದು 55 ರೂಗಳಷ್ಟು ಹೆಚ್ಚಳವಾಗಿದೆ. ಸೋಮವಾರದಿಂದೀಚೆ ಇದು ಮೂರನೇ ಬಾರಿ ಚಿನ್ನದ ಬೆಲೆ ಏರಿಕೆ ಆಗಿರುವುದು. ಕಳೆದ ಏಳೆಂಟು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ಬೆಲೆ ಇವತ್ತು ಗ್ರಾಮ್ಗೆ 1 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 11ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,750 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,000 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,250 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,750 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,000 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 90,750 ರೂ
- ಚೆನ್ನೈ: 90,750 ರೂ
- ಮುಂಬೈ: 90,750 ರೂ
- ದೆಹಲಿ: 90,900 ರೂ
- ಕೋಲ್ಕತಾ: 90,750 ರೂ
- ಕೇರಳ: 90,750 ರೂ
- ಅಹ್ಮದಾಬಾದ್: 90,800 ರೂ
- ಜೈಪುರ್: 90,900 ರೂ
- ಲಕ್ನೋ: 90,900 ರೂ
- ಭುವನೇಶ್ವರ್: 90,750 ರೂ

