ರಜೆಗೆ ಬಂದ ಯೋಧನಿಗೆ ಘೋರ ಅಂತ್ಯ – ಇಬ್ರಾಹಿಂನಿಗೆ ಹೃದಯಾಘಾತ

ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದೀಗ ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಅನಗೋಳದ ಬಜಾರ್‌ನಲ್ಲಿ ನಡೆದಿದೆ.ಇಬ್ರಾಹಿಂ ದೇವಲಾಪುರ (37) ಮೃತ ಯೋಧ .

ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ರಜೆಗೆಂದು ಊರಿಗೆ ಬಂದಿದ್ದರು. ಈ ವೇಳೆ ಅನಗೋಳದ ಬಜಾರ್‌ಗೆ ತೆರಳಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.

ಎದೆನೋವಿನಿಂದ ಯೋಧ ಕುಸಿದು ಬೀಳುತ್ತಿರುವ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ