ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಜಾಸ್ತಿ ಇರುವುದರಿಂದ ಆ. 28 ರಂದು ನಡೆಯುವ ಗಿನ್ನಿಸ್ ವಿಶ್ವದಾಖಲೆ ನಿರ್ಮಿಸುವ ಯೋಗಥಾನ್ ಕಾರ್ಯಕ್ರಮವನ್ನು ಸೆ. 24 ರಂದು ನಿಗದಿಪಡಿಸಲಾಗಿದೆ ಎಂದು ಕಾರವಾರ ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿ, ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾಸ್ಟೆಲ್ ಮಕ್ಕಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಯೋಗಥಾನ್-2022 ಕಾರ್ಯಕ್ರಮವನ್ನು ಸಂಘಟಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಜಿಲ್ಲಾ ಪಂಚಾಯತ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಗಿನ್ನಿಸ್ ವಿಶ್ವದಾಖಲೆ ನಿರ್ಮಿಸುವ ಯೋಗಥಾನ್ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ಆ. 24 ರಂದು ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.