
ಬೆಂಗಳೂರು: ಜುಲೈ 12ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಹಾವೇರಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.
ಇನ್ನು ಜುಲೈ 13ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 14ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 15ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 16 ಮತ್ತು 17ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಸಾಧಾರಣ ಮಳೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
