ಹವಾಮಾನ ವರದಿ; ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರು!

ಬೆಂಗಳೂರು, ಜುಲೈ 13: ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಶಿರಾಲಿ, ಹೊನ್ನಾವರ, ಕುಂದಾಪುರ, ಮಂಗಳೂರು, ಗೋಕರ್ಣ, ಕುಮಟಾ, ಮಂಗಳೂರು, ಆಗುಂಬೆ, ಕಾರ್ಕಳ, ಉಡುಪಿ, ಅಂಕೋಲಾ, ಮುಲ್ಕಿ, ಸಿದ್ದಾಪುರ, ಕ್ಯಾಸಲ್​ರಾಕ್, ಕಾರವಾರ, ಮಾಣಿ, ಕೊಟ್ಟಿಗೆಹಾರ, ಕಮ್ಮರಡಿ, ಮೂಡುಬಿದಿರೆ, ಬಂಟವಾಳ, ಪುತ್ತೂರು, ಶಕ್ತಿನಗರ, ಬೆಳ್ತಂಗಡಿ, ಶೃಂಗೇರಿ, ಭಾಗಮಂಡಲ, ಹುಂಚದಕಟ್ಟೆ, ಕಳಸ, ಬಾಳೆಹೊನ್ನೂರು, ಕೊಪ್ಪ, ಸುಳ್ಯ, ಕದ್ರಾ, ಶಿವಮೊಗ್ಗ, ಬನವಾಸಿ, ಧರ್ಮಸ್ಥಳ, ಯಲ್ಲಾಪುರ, ಭದ್ರಾವತಿ, ಎನ್​ಆರ್​ ಪುರ, ಕೃಷ್ಣರಾಜಸಾಗರ, ನಾಪೋಕ್ಲು, ಚನ್ನಗಿರಿ, ಹೊನ್ನಾಳಿ, ಹೊಸದುರ್ಗ, ತಿಪಟೂರು, ಅಜ್ಜಂಪುರ, ಗುಬ್ಬಿ, ಅಥಣಿ, ಸಿಂದಗಿ, ಲೋಂಡಾ, ಕೆಂಭಾವಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಳೆಯಾಗಿದೆ. ಎಚ್​ಎಎಲ್​​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.