ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ವ್ಯಕ್ತಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ

ಗೋಕರ್ಣ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಘಟನೆ ಬಂಗ್ಲೆಗುಡ್ಡ ಗ್ರಾಮದ ಪೂಣ್ಯಾಶ್ರಮ ಬಳಿ ನಡೆದಿದೆ.

ಹನೇಹಳ್ಳಿ ಮೂಲದ ವಿಠ್ಠಲ ನಾಗೇಶ ಗೌಡ ಎಂಬಾತನು ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದನು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಗೋಕರ್ಣ ಪೊಲೀಸರು ಸ್ಥಳಕ್ಕೆ ಧಾವಿಸಿ ಆತನನ್ನು ವಶಕ್ಕೆ ಪಡೆದರು.

ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆಯ ವರದಿ ಪಾಸಿಟಿವ್ ಆಗಿರುವುದರಿಂದ ಆರೋಪಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.