ರಾಜ್ಯ ಸರ್ಕಾರವು ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಎಸ್ಪಿ ಎಂ. ನಾರಾಯಣ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ದೀಪನ್ ಎಂ.ಎನ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಎಸ್ಪಿ ಆಗಿ ನೇಮಕ ಮಾಡಲಾಗಿದೆ.
