
ಬೆಂಗಳೂರು, ಜುಲೈ 16: ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ವರುಣನ ಆರ್ಭಟ ಮುಂದುವರಿಯಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
ಜುಲೈ 16 (ಮಂಗಳವಾರ): ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹೊರಡಿಸಲಾಗಿದೆ. ಗುಡುಗು ಸಹಿತ ಮಳೆ ಸಂಭವಿಸಬಹುದು.
ಜುಲೈ 17 (ಬುಧವಾರ): ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ತೀವ್ರ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 18 (ಗುರುವಾರ): ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮತ್ತೆ ಆರೆಂಜ್ ಅಲರ್ಟ್, ತೀವ್ರ ಮಳೆಯ ನಿರೀಕ್ಷೆ.
ಬೆಳಗಾವಿ, ಬೀದರ್, ಧಾರವಾಡ, ಬೆಂಗಳೂರು, ರಾಮನಗರ, ಚಾಮರಾಜನಗರ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಬಹುದು.
ಜುಲೈ 19 (ಶುಕ್ರವಾರ): ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಭರ್ಜರಿ ಮಳೆಯ ಮುನ್ಸೂಚನೆ ಇದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

