ಭಾರಿ ಮಳೆ ಹಿನ್ನೆಲೆ; ಉ.ಕ ಜಿಲ್ಲೆಯ ೫ ತಾಲೂಕಿನ ಅಂಗನವಾಡಿ, ಶಾಲೆ ಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು ಗುರುವಾರ ಜುಲೈ 17 ರಂದು ಉತ್ತರ ಕನ್ನಡದ ೫ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.