ಕುಮಟಾ ಜು.18 : ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮೆರೆದಿರುವ ಕುಮಟಾ ತಾಲೂಕಿನ ಬಿ.ಕೆ ಭಂಡಾರಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಗುರುರಾಜ ಎಸ್. ಶೆಟ್ಟಿ ಯವರಿಗೆ ರಾಷ್ಟ್ರಮಟ್ಟದ ಸಂಸ್ಥೆ ‘ಇಂಡಿಯನ್ ಟ್ಯಾಲೆಂಟ್ ಒಲಿಂಪಿಯಾಡ್’ನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಐಟಿಓ ಸಂಸ್ಥೆ ರಾಷ್ಟ್ರ ಮಟ್ಟದಲ್ಲಿ ಒಂದನೇ ತರಗತಿಯಿಂದ ಹನ್ನೆರಡನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ, ಇಂಗ್ಲಿಷ್, ಗಣಕ ವಿಜ್ಞಾನ ಸೇರಿದಂತೆ ವಿವಿಧ ವಿಷಯಗಳಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆಗಳನ್ನು ನಡೆಸುತ್ತಿದೆ. ಗುರುರಾಜ್ ಶೆಟ್ಟಿಯವರು ಕೊಂಕಣ ಸಂಸ್ಥೆಯಲ್ಲಿ ಎಸ್.ಓ.ಎಫ್, ಸಿಲ್ವರ್ಝೋನ್, ಐಟಿಓ, ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಂಓ, ಐಎಸ್‌ಓ, ಐಸಿಓ,ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಸಿದ್ಧಪಡಿಸುತ್ತಾ ಬಂದಿರುವ ಗುರುರಾಜ್ ಶೆಟ್ಟಿಯವರು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಈ ಸಮರ್ಪಣಾ ಮನೋಭಾವ, ನಾಯಕತ್ವ ಗುಣ ಹಾಗೂ ಯುವ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ರೂಢಿಸುವಲ್ಲಿನ ನಿರಂತರ ಸೇವೆ ಮತ್ತು ಬದ್ಧತೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಮುಂಬೈನಲ್ಲಿ ನವೆಂಬರ್ ತಿಂಗಳಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಡಾ. ಕಿರಣ್ ಬೇಡಿ ಹಾಗೂ ಸೈನಾ ನೆಹವಾಲ್ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಗುರುರಾಜ್ ಶೆಟ್ಟಿ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಗುರುರಾಜ್ ಎಸ್. ಶೆಟ್ಟಿಯವರ ಈ ಮಹತ್ತರ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಪ್ರಾಚಾರ್ಯ ಕಿರಣ್ ಭಟ್ಟ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.



