ಡಿಕೆ ಶಿವಕುಮಾರ್ ಅವರ ಎಸ್ಕಾರ್ಟ್ ವಾಹನ ಪಲ್ಟಿ – ಇಬ್ಬರು ಸಿಬ್ಬಂದಿಗೆ ಸಣ್ಣ ಗಾಯ

ಮಂಡ್ಯ, ಜುಲೈ 19: ಮೈಸೂರು ನಗರದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು, ಬಳಿಕ ಬೆಂಗಳೂರಿಗೆ ಮರಳುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.

ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ – ಟಿಎಂ ಹೊಸೂರು ಕ್ರಾಸ್ ಬಳಿ ಇರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ವಾಹನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ವಾಹನದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಮೈಸೂರು ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.