ಹಾಸನ: ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ಪಶ್ಚಾತ್ತಾಪ ಪಟ್ಟಿಲ್ಲ. ಏನಾಯ್ತು ಅಂತ ವಿವರಿಸಿದ್ದೇನೆ ಅಷ್ಟೇ. ಇದು ಅಪಪ್ರಚಾರ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ತಮ್ಮ ತಪ್ಪಿನ ಬಗ್ಗೆ ಪಶ್ಚಾತಾಪ ಪಟ್ಟಿದ್ದಾರೆ ಎಂಭ ರಂಭಾಪುರಿ ಶ್ರಿಗಳ ಹೇಳಿಗೆಗೆ ಸಿದ್ದು ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ, ಶ್ಯಾಮನೂರು ಶಿವಶಂಕರಪ್ಪ ಅವರು ವೀರಶೈವ ಧರ್ಮ ಮಾಡಿ ಅಂತ ಅರ್ಜಿ ಕೊಟ್ಟರು ಆಗಿನಿಂದ ಇದು ಶುರುವಾಯ್ತು ಅಷ್ಟೇ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯವರು ಹಿಂದುತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಕೋಮುವಾದ ಅಜೆಂಡಾ ಇಟ್ಕಂಡು ಎಲ್ಲವನ್ನೂ ಮಾಡ್ತಾ ಇದ್ದಾರೆ. ಹಿಂದೂ ರಾಷ್ಟ್ರ ಮಾಡಬೇಕೆಂಬುದು ಅವರ ಅಜೆಂಡಾ, ಅದನ್ನು ಮಾಡಲು ಹೋಗ್ತಾ ಇದ್ದಾರೆ, ಆದರೆ ಸಂವಿಧಾನದಲ್ಲಿ ಎಲ್ಲ ಧರ್ಮವನ್ನು ಸಮಾನಾಗಿ ಕಾಣಬೇಕು, ಸಮಾನಾಗಿ ಗೌರವಿಸಬೇಕು, ಎಲ್ಲರಿಗೂ ಕೂಡ ಕಾನೂನು ರಕ್ಷಣೆ ಕೊಡಬೇಕು, ತಾರತಮ್ಯ ಮಾಡಬಾರದು ಅಂತ ಹೇಳ್ತಾರೆ. ಆದರೆ ಬಿಜೆಪಿಯವರು ತಾರತಮ್ಯ ಮಾಡ್ತಾ ಇದ್ದಾರೆ ಎಂದರು.