“ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ”

ಬೆಂಗಳೂರು, ಜುಲೈ 22: ಚಿನ್ನದ ಬೆಲೆ ಇವತ್ತು ದಾಖಲೆ ಮಟ್ಟಕ್ಕೆ ಸಮೀಪಿಸಿದೆ. ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಹಳದಿ ಲೋಹದ ದರ ಇಂದು ಮಂಗಳವಾರ ಗ್ರಾಮ್​ಗೆ 105 ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 9,285 ರೂ ಮುಟ್ಟಿದೆ. ಜೂನ್ ಎರಡನೇ ವಾರದಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟವಾದ 9,320 ರೂ ಮುಟ್ಟಿತು. ಮತ್ತೆ ಆ ಮಟ್ಟ ತಲುಪುತ್ತ ಚಿನ್ನದ ಬೆಲೆ ಸಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿದೆ. ಬೆಳ್ಳಿ ಬೆಲೆಯಂತೂ ದಾಖಲೆ ಮಟ್ಟಕ್ಕೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,290 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,850 ರೂ
  • ಚೆನ್ನೈ: 92,850 ರೂ
  • ಮುಂಬೈ: 92,850 ರೂ
  • ದೆಹಲಿ: 93,000 ರೂ
  • ಕೋಲ್ಕತಾ: 92,850 ರೂ
  • ಕೇರಳ: 92,850 ರೂ
  • ಅಹ್ಮದಾಬಾದ್: 92,900 ರೂ
  • ಜೈಪುರ್: 93,000 ರೂ
  • ಲಕ್ನೋ: 93,000 ರೂ
  • ಭುವನೇಶ್ವರ್: 92,850 ರೂ