ಕಿಂಗ್ ಚಾರ್ಲ್ಸ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿಯಿಂದ ವಿಶಿಷ್ಟ ಉಡುಗೊರೆ

ಲಂಡನ್, ಜುಲೈ 25: ಪ್ರಧಾನಿ ನರೇಂದ್ರ ಮೋದಿ ಬ್ರಿಟನ್ ಪ್ರವಾಸದ ಸಂದರ್ಭದಲ್ಲಿ ಸ್ಯಾಂಡ್ರಿಂಗ್‌ಹ್ಯಾಮ್ ಹೌಸ್‌ನಲ್ಲಿ ಬ್ರಿಟನ್ ರಾಜ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿಯಾಗಿ ಆತ್ಮೀಯ ಸಂಭಾಷಣೆ ನಡೆಸಿದರು. ಈ ವೇಳೆ ಅವರು ಚಾರ್ಲ್ಸ್ ಅವರಿಗೆ ಗಿಡವೊಂದನ್ನು ವಿಶೇಷ ಉಡುಗೊರೆಯಾಗಿ ನೀಡಿದರು. ಈ ಘಟ್ಟದ ಫೋಟೋ ಹಾಗೂ ಮಾಹಿತಿಯನ್ನು ಬ್ರಿಟಿಷ್ ರಾಜಮನೆತನವು ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ಪ್ರಧಾನಿ ಮೋದಿ ಪ್ರಾರಂಭಿಸಿರುವ “ಏಕ್ ಪೇಡ್ ಮಾ ಕೆ ನಾಮ್” (ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನದ ಭಾಗವಾಗಿ ಈ ಗಿಡವನ್ನು ಉಡುಗೊರೆಯಾಗಿ ನೀಡಲಾಗಿದೆ.

ಇದೇ ವೇಳೆ, ಪ್ರಧಾನಿ ಮೋದಿ ಹಾಗೂ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ಸಮ್ಮುಖದಲ್ಲಿ ಭಾರತ-ಬ್ರಿಟನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ)ಕ್ಕೆ ಸಹಿ ಹಾಕಲಾಗಿದೆ. ನಂತರ ಪ್ರಧಾನಿ ಮೋದಿ ಪೂರ್ವ ಇಂಗ್ಲೆಂಡ್‌ನ ನಾರ್ಫೋಕ್‌ನ ಸ್ಯಾಂಡ್ರಿಂಗ್‌ಹ್ಯಾಮ್ ಎಸ್ಟೇಟ್‌ಗೆ ಭೇಟಿ ನೀಡಿ ಕಿಂಗ್ ಚಾರ್ಲ್ಸ್ ಅವರನ್ನು ಭೇಟಿಯಾದರು.