ಭಾರಿ ಮಳೆ ಹಿನ್ನೆಲೆ; ಉ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆ ನಾಳೆ ಜುಲೈ 26ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನ ಅಂಗನವಾಡಿ, ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.