ತುಮಕೂರು: ಚಲಿಸುತ್ತಿದ್ದ ಲಾರಿ ಹಾಗೂ ಸ್ವಿಫ್ಟ್ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಅವಿನಾಶ್ (28), ಪ್ರಣಂತಿ (5) ತಂದೆ ಮಗಳಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದರೆ ಸೌಖ್ಯ (4) ಮತ್ತೋರ್ವ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ತರೂರು ಗೇಟ್ ಬಳಿ ದುರ್ಘಟನೆ ಸಂಭವಿಸಿದೆ.
ಶಿರಾ ತಾಲೂಕಿನ ಕಡವಿಗೆರೆ ಗ್ರಾಮದಿಂದ ನೆಲಹಾಲ್ ಗೆ ಮೂವರು ಕಾರಿನಲ್ಲಿ ತೆರಳುತ್ತಿದ್ದರು. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮತ್ತೋರ್ವ ಬಾಲಕಿಗೆ ಗಾಯಗಳಾಗಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಳು ಬಾಲಕಿ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.