ಬೆಂಗಳೂರು, ಜುಲೈ 29: ಚಿನ್ನದ ಬೆಲೆ ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಕಳೆದ ವಾರ ಗ್ರಾಮ್ಗೆ 200ಕ್ಕೂ ಹೆಚ್ಚು ಮೊತ್ತದಷ್ಟು ಬೆಲೆ ಇಳಿಕೆಯಾಗಿತ್ತು. ಇವತ್ತು ಮಂಗಳವಾರ ಬೆಲೆ ಗ್ರಾಮ್ಗೆ 10 ರೂ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆಯಾಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 91,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 91,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 29ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,820 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,870 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,930 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 91,500 ರೂ
- ಚೆನ್ನೈ: 91,500 ರೂ
- ಮುಂಬೈ: 91,500 ರೂ
- ದೆಹಲಿ: 91,650 ರೂ
- ಕೋಲ್ಕತಾ: 91,500 ರೂ
- ಕೇರಳ: 91,500 ರೂ
- ಅಹ್ಮದಾಬಾದ್: 91,550 ರೂ
- ಜೈಪುರ್: 91,650 ರೂ
- ಲಕ್ನೋ: 91,650 ರೂ
- ಭುವನೇಶ್ವರ್: 91,500 ರೂ
