ದಾವಣಗೆರೆ: ಮಕ್ಕಳ ಜೊತೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಖತ್ ಸ್ಟೇಪ್ ಹಾಕಿದ್ದಾರೆ. ರಾರಾ ರಕ್ಕಮ್ಮ ಸಾಂಗ್ ಗೆ ಮಕ್ಕಳೊಂದಿಗೆ ರೇಣುಕಾಚಾರ್ಯ ಕುಣಿದು ಕುಪ್ಪಳಿಸಿದ್ದಾರೆ.
ಹೊನ್ನಾಳಿಯ ಕತ್ತಿಗೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆದಿತ್ತು.ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ರೇಣುಕಾಚಾರ್ಯ ಮಕ್ಕಳ ಜೊತೆ ಡ್ಯಾನ್ಸ್ ಮಾಡಿ ಸಖತ್ ಎಂಜಾಯ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಫುಲ್ ವೈರಲ್ ಆಗಿದೆ.