ಚಿಂತಕ, ಹಿರಿಯ ಪತ್ರಕರ್ತ ಉದಯ ಧರ್ಮಸ್ಥಳ ಇನ್ನಿಲ್ಲ

ಬೆಂಗಳೂರು: ಕನ್ನಡ ಮತ್ತು ತುಳು ಭಾಷೆಯ ಉಳಿವಿಗಾಗಿ ಹೋರಾಟಗಳನ್ನು ಸಂಘಟಿಸಿದ್ದ ಸಾಹಿತಿ, ಚಿಂತಕ, ಪತ್ರಕರ್ತ ಉದಯ ಧರ್ಮಸ್ಥಳ (64) ಅವರು ಶುಕ್ರವಾರ (ಆ 19) ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಅಲ್ಪಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರ ಸಹಿತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.

ಮೂಲತಃ ಧರ್ಮಸ್ಥಳದವರಾದ ಅವರು ಬೆಂಗಳೂರಿನ ಮಾರತಹಳ್ಳಿಯಲ್ಲಿ ನೆಲೆಸಿದ್ದರು. ಸನಾತನ ಸಾರಥಿ ಪತ್ರಿಕೆಯ ಸಂಪಾದಕರಾಗಿದ್ದ ಅವರು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ ಸಾಹಿತ್ಯ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು. ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ತುಳುವನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದ ಹೋರಾಟದಲ್ಲೂ ಸಕ್ರಿಯರಾಗಿದ್ದರು.

ಸದಾ ಕ್ರೀಯಾಶೀಲರಾಗಿದ್ದ 64 ವರ್ಷದ ಉದಯ ರವರು ಕಳೆದ ಮೂರು ದಶಕಗಳಿಗಿಂತಲೂ ಹೆಚ್ಟು ಕಾಲ ಕನ್ನಡದ ಹಿತರಕ್ಷಣೆಗಾಗಿ ಮುಂಚೂಣಿಯಲ್ಲಿ ನಿಂತಿದ್ದರು. ಇವರ ನಿಧನಕ್ಕೆ ಸಾಹಿತ್ಯ ಅಭಿಮಾನಿಗಳು ಹಾಗೂ ಗಣ್ಯರು ಕಂಬನಿ ಮಿಡಿದಿದ್ದಾರೆ.