ಬೆಂಗಳೂರು: ದೇಶದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಆಚರಣೆ ಬೆನ್ನಲ್ಲೇ ಇದೀಗ ಇ-ಕಾಮರ್ಸ್ ಅಮೇಜಾನ್ ಸಂಸ್ಥೆ ಹಿಂದೂ ದೇವರಿಗೆ ಅಪಮಾನ ಮಾಡಿದ ಆರೋಪ ಕೇಳಿಬಂದಿದೆ. ಹೌದು ರಾಧಾ ಕೃಷ್ಣರ ‘ಅಶ್ಲೀಲ’ ವರ್ಣಚಿತ್ರಗಳನ್ನು ಮಾರಾಟ ಮಾಡುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಆರೋಪಿಸಿದೆ.
ಹೀಗಾಗಿ ಅಮೇಜಾನ್ ಬಹಿಷ್ಕಾರ ಮಾಡಬೇಕೆಂಬ ಕೂಗು ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತವಾಗುತ್ತಿದೆ. ಅಮೆಜಾನ್ ಇ-ಕಾಮರ್ಸ್ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಗೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ.
ಇನ್ನು ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಈ ವರ್ಣಚಿತ್ರ ಎಕ್ಸೋಟಿಕ್ ಇಂಡಿಯಾದ ವೆಬ್ ಸೈಟ್ ನಲ್ಲಿ ಲಭ್ಯವಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.