ನೂತನ ಇಓ ಆಗಿ ಸುನಿಲ್ ಎಂ. ಅಧಿಕಾರ ಸ್ವೀಕಾರ

ಭಟ್ಕಳ: ತಾಲೂಕು ಪಂಚಾಯಿತಿ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶ್ರೀ ಸುನಿಲ್ ಎಂ. ಶನಿವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಅಂಕೋಲಾ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ನೂತನ ಅಧಿಕಾರಿಗೆ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕರವರು ಅಧಿಕಾರ ಹಸ್ತಾಂತರಿಸಿದರು. ನೂತನ ತಾಪಂ ಇಒ ಸುನಿಲ್ ಎಂ ಮಾತನಾಡಿ, ಆಡಳಿತ ಮಂಡಳಿಯ ಸರ್ವ ಸದಸ್ಯರ, ಕಚೇರಿಯ ಸಿಬ್ಬಂದಿ ಹಾಗೂ ತಾಪಂ ಅಧೀನ ಇಲಾಖೆಗಳ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸಹಾಯಕ ಲೆಕ್ಕಾಧಿಕಾರಿ ರಾಜೇಶ್ ಮಹಾಲೆ. ವ್ಯವಸ್ಥಾಪಕ ಕೃಷ್ಣಕಾಂತ್ ನಾಯ್ಕ ಉಪಸ್ಥಿತರಿದ್ದರು.