ಬೆಂಗಳೂರಿನಲ್ಲಿ ಮಳೆಯ ಮುನ್ಸೂಚನೆ – ಆಗಸ್ಟ್ 6ರಿಂದ ಯೆಲ್ಲೋ ಅಲರ್ಟ್

ಬೆಂಗಳೂರು, ಆಗಸ್ಟ್​ 03: ಕರ್ನಾಟಕದಾದ್ಯಂತ ಮುಂಗಾರಿನ ಅಬ್ಬರ ಸ್ವಲ್ಪ ತಗ್ಗಿದೆ. ಆದರೆ ಆಗಸ್ಟ್​ 6ರ ನಂತರ ಮತ್ತೆ ಹೆಚ್ಚಳವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಬಳಿಕ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಆಗುಂಬೆ, ಶಿರಾಲಿ, ಮಂಕಿ, ಮಂಗಳೂರು, ಕೋಟಾ, ಹೊನ್ನಾವರ, ಭಾಗಮಂಡಲ, ಸುಳ್ಯ, ಹೊನ್ನಾವರ, ಶೃಂಗೇರಿ, ಶಕ್ತಿನಗರ, ಮೂಡುಬಿದಿರೆ, ಮಾಣಿ, ಮಂಗಳೂರು, ಕಾರ್ಕಳ, ಗೋಕರ್ಣ, ಗೇರುಸೊಪ್ಪ, ಅಂಕೋಲಾದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಎರಡು ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಎಚ್​​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.