ಯೆಲ್ಲೋ ಲೈನ್ ಓಪನ್‌ಗೆ ಡೇ ಫಿಕ್ಸ್‌ – ಆ.10ರಂದು ಪ್ರಧಾನಿ ಮೋದಿ ಉದ್ಘಾಟನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆ.10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್  ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಮೆಟ್ರೋ ಫೇಸ್ 3ಗೂ ಮೋದಿಯವರು ಅಂದೇ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗ ಸುಮಾರು 19.5 ಕಿ.ಮೀ ಇದ್ದು, ಸಂಚಾರ ಮುಕ್ತಕ್ಕೆ ಸಿದ್ಧವಾಗಿದೆ. ಈ ಮಾರ್ಗ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸಲಿದೆ. ಪ್ರತಿದಿನ ಸುಮಾರು 25,000 ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆ ಇದೆ. ರೈಲುಗಳು 20 ರಿಂದ 30 ನಿಮಿಷಗಳ ಅಂತರದಲ್ಲಿ ಸಂಚರಿಸುವ ಸಾಧ್ಯತೆ ಇದೆ. 

ಈ ಮಾರ್ಗದ ಬಗ್ಗೆ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ಸುರಕ್ಷತಾ ತಪಾಸಣೆ ವರದಿ ಸಲ್ಲಿಕೆ ಮಾಡಿದ್ದಾರೆ. ವರದಿಯಲ್ಲಿ ಕೆಲವು ಸಣ್ಣಪುಟ್ಟ ಷರತ್ತುಗಳನ್ನು ವಿಧಿಸಲಾಗಿದೆ. ಅವುಗಳನ್ನು ಕೆಲವೇ ದಿನಗಳಲ್ಲಿ ಸರಿಪಡಿಸುವುದಾಗಿ ಬಿಎಂಆರ್‌ಸಿಎಲ್‌ ಹೇಳಿದೆ.