ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆಯು ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
