ಬೆಂಗಳೂರು, ಆಗಸ್ಟ್ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಇವತ್ತು ಬುಧವಾರವೂ ಮುಂದುವರಿದಿದೆ. ಎರಡು ದಿನಗಳಿಂದ 80 ರೂಗೂ ಹೆಚ್ಚು ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ ಇವತ್ತು 10 ರೂಗಳಷ್ಟು ಅಲ್ಪ ಏರಿಕೆ ಪಡೆದಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 1 ರೂ ಏರಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 93,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,02,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 93,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 6ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,750 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,330 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 93,800 ರೂ
- ಚೆನ್ನೈ: 93,800 ರೂ
- ಮುಂಬೈ: 93,800 ರೂ
- ದೆಹಲಿ: 93,950 ರೂ
- ಕೋಲ್ಕತಾ: 93,800 ರೂ
- ಕೇರಳ: 93,800 ರೂ
- ಅಹ್ಮದಾಬಾದ್: 93,850 ರೂ
- ಜೈಪುರ್: 93,950 ರೂ
- ಲಕ್ನೋ: 93,950 ರೂ
- ಭುವನೇಶ್ವರ್: 93,800 ರೂ
