ಬೆಳಗಾವಿ, ಆಗಸ್ಟ್ 06: ಮಸೀದಿಯಲ್ಲಿ ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವಂತಹ ಘಟನೆ 2023ರ ಅಕ್ಟೋಬರ್ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಬಾಲಕಿ ಪೋಷಕರನ್ನು ಹುಡುಕಿ ಕೇಸ್ ದಾಖಲಿಸಿಲಾಗಿದೆ. ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್ (22) ಎಂಬಾತನನ್ನು ಬಂಧಿಸಿದ ಮುರಗೋಡ ಪೊಲೀಸರು ಹಿಂಡಲಗಾ ಜೈಲಿಗಟ್ಟಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗುವ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಘಟನೆ ನಡೆದು ಎರಡು ವರ್ಷ ಕಳೆದರೂ ಭಯ ಪಟ್ಟು ಬಾಲಕಿ ಪೋಷಕರು ಕೇಸ್ ನೀಡಿರಲ್ಲಿ. ವಿಡಿಯೋ ಸಿಗುತ್ತಿದ್ದಂತೆ ಪೊಲೀಸರೇ ಬಾಲಕಿ ತಂದೆಯ ಮನವೊಲಿಸಿ ಕೇಸ್ ದಾಖಲಿಸಿದ್ದಾರೆ.

