ಮಳೆ ಅಟ್ಟಹಾಸದ ಮುನ್ಸೂಚನೆ: ರಾಜ್ಯದ 6 ಜಿಲ್ಲೆಗಳಿಗೆ ಎಚ್ಚರಿಕೆ ಸೂಚನೆ

ಬೆಂಗಳೂರು: ಇಂದು ರಾಜ್ಯದ 6 ಜಿಲ್ಲೆಗಳಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಜಾರಿ ಮಾಡಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಕೆಲ‌ ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆ‌ಯಾಗಲಿದೆ

ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ರಾತ್ರಿ ಇಡೀ ಬೆಂಗಳೂರು ನಗರದಾದ್ಯಂತ ಮಳೆಯಾಗಿತ್ತು. ಇಂದು ಬೆಳಗ್ಗೆ ನಗರದ ಹಲವು ಕಡೆ ತುಂತುರು ಮಳೆಯಾಗಿದೆ.