ಯಲ್ಲಾಪುರ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಶನಿವಾರ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ದೇವರಾಜ ಅರಸು ಅವರ 107 ನೇ ಜನ್ಮದಿನ ಆಚರಿಸಲಾಯಿತು.
ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇವರಾಜ ಅರಸು ಅವರು ಸಮಾನತೆಯ ಹರಿಕಾರರಷ್ಟೇ ಅಲ್ಲ, ಹಿಂದುಳಿದ ವರ್ಗದವರ ಧ್ವನಿಯಾಗಿದ್ದರು ಎಂದರು.
ಶಿಕ್ಷಕ ವಿನೋದ ಭಟ್ಟ, ಅರಸು ಅವರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು. ಪ.ಪಂ ಅಧ್ಯಕ್ಷೆ ಸುನಂದಾ ದಾಸ್ ಅಧ್ಯಕ್ಷತೆ ವಹಿಸಿದ್ದರು. ಪ.ಪಂ ಉಪಾಧ್ಯಕ್ಷೆ ಶ್ಯಾಮಲಿ ಪಾಟಣಕರ್, ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ್, ತಾ.ಪಂ ಇಒ ಜಗದೀಶ ಕಮ್ಮಾರ, ಬಿಇಒ ಎನ್.ಆರ್.ಹೆಗಡೆ, ಡಾ.ನರೇಂದ್ರ ಪವಾರ, ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯ, ಬಿಸಿಎಂ ವಿಸ್ತರಣಾಧಿಕಾರಿ ಶ್ರೀಕಾಂತ ದೇವಲತ್ತಿ, ಗ್ರೇಡ್ 2 ತಹಸೀಲ್ದಾರ್ ಸಿ.ಜಿ.ನಾಯ್ಕ ಇತರರಿದ್ದರು.