ಕುಮಟಾ: ಉ.ಕ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯಾಲಯ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಾ ಮಟ್ಟದ ವಿಜ್ಞಾನ ವಿಚಾರಗೊಷ್ಠಿಯು ತಾಲೂಕಿನ ಧಾರೇಶ್ವರ ಜನತಾ ವಿದ್ಯಾಲಯದಲ್ಲಿ ನಡೆಯಿತು.
ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್ ವಿದ್ಯಾರ್ಥಿನಿ ಸುವರ್ಣ ಮಂಜುನಾಥ ಭಂಡಾರಕರ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಮಹಾತ್ಮಾಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ನಾಯಕ, ಉಪಾಧ್ಯಕ್ಷ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯೋಪಾಧ್ಯಾಪಕ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.