ಕೋಲಾರ : ಮೂವರು ಮಕ್ಕಳು ಸೇರಿದಂತೆ 10 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಶ್ರೀನಿವಾಸಪುರ ಪಟ್ಟಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಬಾಂಗ್ಲಾದೇಶ ಪ್ರಜೆಗಳು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅವರೊಟ್ಟಿಗೆ ಬಂದಿದ್ದ ಉಳಿದ ಎಂಟು ಮಂದಿ ಬಗ್ಗೆ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ.

ಮಾಹಿತಿ ಆಧಾರಿಸಿ ಪೊಲೀಸರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಬಳಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ 10 ಮಂದಿ ಬ್ಲಾಂಗಾದೇಶ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್. ಬಿ. ಅವರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಹತ್ತೂ ಜನ ಬಾಂಗ್ಲಾದೇಶದ ಕುಲ್ನಾ ರಾಜ್ಯದ ಬಾಗೇರ್ ಹಠ್ ಜಿಲ್ಲೆಯ ತಪಲ್ಬರಿ ಗ್ರಾಮದವರು ಎಂದು ತಿಳಿದುಬಂದಿದೆ.



