
ಬೆಂಗಳೂರು, ಆಗಸ್ಟ್ 15: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ಮಾಣೆಕ್ ಷಾ ಪರೇಡ್ ಮೈದಾನಕ್ಕೆ ತೆರಳಿ ಅಲ್ಲಿ ಮತ್ತೊಮ್ಮೆ ಧ್ವಜಾರೋಹಣ ಮಾಡಿ, ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಿಸಿದರು.

ರಾಜ್ಯದ ಜನತೆಗೆ ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು ಧನ್ಯತಾಭಾವದಿಂದ ಸ್ಮರಿಸೋಣ ಎಂದು ಕರೆ ನೀಡಿದರು. ಜೊತೆಗೆ, ಪಹಲ್ಗಾಮ್ ದಾಳಿಯಲ್ಲಿ ಮಡಿದವರು ಮತ್ತು ಪಾಕ್ ವಿರುದ್ಧ ಹೋರಾಡಿ ಪ್ರಾಣ ಬಲಿದಾನ ಮಾಡಿದವರಿಗೂ ಗೌರವ ಸಲ್ಲಿಸಿದರು.
