ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆ ಮೇಲೆ ಗುಂಡಿನ ದಾಳಿ

ಗುರುಗ್ರಾಮ, ಆಗಸ್ಟ್ 17: ಜನಪ್ರಿಯ ಯೂಟ್ಯೂಬರ್ ಎಲ್ವಿಶ್ ಯಾದವ್ ಅವರ ಮನೆಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ದಾಳಿಕೋರರು ಮನೆಯಿಂದ ಹೊರಗೆ ನಿಂತುಕೊಂಡೇ ಸುಮಾರು 24 ಸುತ್ತು ಗುಂಡು ಹಾರಿಸಿದ್ದಾರೆ. ಗುಂಡಿನ ಮಳೆ ಸುರಿದ ಪರಿಣಾಮ ಸ್ಥಳೀಯರಲ್ಲಿ ಭೀತಿ, ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯ ಬಳಿಕ ದುಷ್ಕರ್ಮಿಗಳು ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.